Sunday, November 22, 2026
HomeBelagaviನಾಳೆ ರೈತರ ಹೋರಾಟ: ಸಿಎಂ, ಜೋಶಿ ಚರ್ಚಿಸಿದ್ದೇನು ?

ನಾಳೆ ರೈತರ ಹೋರಾಟ: ಸಿಎಂ, ಜೋಶಿ ಚರ್ಚಿಸಿದ್ದೇನು ?

ಬೆಳಗಾವಿ/ ಬೆಂಗಳೂರು
ಪ್ರಸಕ್ತ ಸಾಲಿನ ಕಬ್ಬು ಹಂಗಾಮಿನಲ್ಲಿ ಕಬ್ಬಿನ ದರ ನಿಗದಿ ಕುರಿತು ಕರ್ನಾಟಕದ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಆತಂಕಗಳ ಬಗ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಲ್ಹಾದ್ ಜೋಶಿಗೆ ಭೇಟಿ ಮಾಡಿ ಚರ್ಚಿಸಿದರು.
ಕಬ್ಬು ಬೆಳೆಗಾರರಿಗೆ ನ್ಯಾಯಯುತ ಹಾಗೂ ಲಾಭದಾಯಕ ಬೆಲೆ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಒತ್ತಾಯಿಸಿದರು. ಕಬ್ಬು ಬೆಳೆಗಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕದ ಅಭಿಪ್ರಾಯಗಳನ್ನು ಪರಿಗಣಿಸಬೇಕು ಹಾಗೂ ರೈತರ ಆತಂಕಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
2026-27ನೇ ಸಾಲಿನ ಸಕ್ಕರೆ ಹಂಗಾಮಿನಲ್ಲಿ ಕಬ್ಬಿನ ದರ ನಿಗದಿ ವಿಚಾರದಲ್ಲಿ ರೈತರ ಹಿತಾಸಕ್ತಿಗೆ ಆದ್ಯತೆ ನೀಡುವಂತೆ ಕೇಂದ್ರ ಸಚಿವರ ಗಮನ ಸೆಳೆದರು.

Total Views 61
RELATED ARTICLES

Most Popular

Recent Comments

KNN City News
Home
E-Paper