
ದೆಹಲಿ
ದೆಹಲಿಯಲ್ಲಿ ಅ.12ರಂದು ನಡೆದ ಕಬ್ಬು ಬೆಳೆಗಾರರ ಸಭೆಯಲ್ಲಿ ರೈತರ ಸಮಸ್ಯೆ, ಅಹವಾಲುಗಳನ್ನು ಆಲಿಸಿದ್ದ ಸಚಿವರು ಇದೀಗ ಕಬ್ಬು ಬೆಳೆಗಾರರ ನೈಜ ಸಮಸ್ಯೆಗಳ ಬಗ್ಗೆ ಅಧ್ಯಯನಕ್ಕೆ ಕೇಂದ್ರದಿಂದ ಜಂಟಿ ಸಮಿತಿ ರಚಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಅವರಿಗೂ ಪತ್ರ ಬರೆದು ಗಮನ ಸೆಳೆದಿದ್ದಾರೆ.
ರಾಜ್ಯದ ಕಬ್ಬು ಬೆಳೆಗಾರರ ಮನವಿಗೆ ರಾಜ್ಯ ಸರ್ಕಾರ ತಕ್ಷಣವೇ ಸ್ಪಂದಿಸಬೇಕು ಹಾಗೂ ರಾಜ್ಯದ ಕಬ್ಬು ಬೆಳೆಗಾರರಿಗೆ ʼರಾಜ್ಯ ಸಲಹಾ ಬೆಲೆ (SAP)ʼಯನ್ನು ಜಾರಿಗೊಳಿಸುವ ಮೂಲಕ ರೈತರ ಹಿತ ಕಾಪಾಡಬೇಕೆಂದು ಪತ್ರದಲ್ಲಿ ತಿಳಿಸಿದ್ದಾರೆ.
ದೆಹಲಿಯಲ್ಲಿ ಕಬ್ಬು ಬೆಳೆಗಾರರು ಮತ್ತು ಪ್ರತಿನಿಧಿಗಳೊಂದಿಗೆ ನಡೆದ ಸುದೀರ್ಘ ಚರ್ಚೆಯ ಬಳಿಕ, ರೈತ ಮುಖಂಡರು ನೀಡಿದ ಮನವಿ ಮೇರೆಗೆ ರಾಜ್ಯದಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತಂತೆ ಸಚಿವ ಜೋಶಿ ಅವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.
ಸಿಎಂಗೆ ಬರೆದ ಪತ್ರದಲ್ಲಿ ಸಕ್ಕರೆ ಇಳುವರಿಯ ಸ್ವತಂತ್ರ ತಪಾಸಣೆ, ತೂಕದ ಯಂತ್ರಗಳ ಪಾರದರ್ಶಕ ಪರಿಶೀಲನೆ, ಯಂತ್ರ ಕೊಯ್ಲಿನ ಶೇ.8ರಷ್ಟು ಕಡಿತದ ಮರುಪರಿಶೀಲನೆ, ರಾಜ್ಯ ಸಲಹಾ ಬೆಲೆ (SAP) ಘೋಷಣೆ ಸೇರಿದಂತೆ ಕಬ್ಬು ಬೆಳೆಗಾರರ ಹಲವು ಬೇಡಿಕೆ-ಮನವಿಗಳ ಬಗ್ಗೆ ರಾಜ್ಯ ಸರ್ಕಾರ ತಕ್ಷಣವೇ ಸ್ಪಂದಿಸಬೇಕು ಎಂದು ಒತ್ತಾಯಿಸಿದ್ದಾರೆ.
