Thursday, November 19, 2026
HomeBelagaviಶಿವಾನಂದ ಕೌಜಲಗಿ ನಿಧನಕ್ಕೆ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸಂತಾಪ

ಶಿವಾನಂದ ಕೌಜಲಗಿ ನಿಧನಕ್ಕೆ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸಂತಾಪ

ಬೆಳಗಾವಿ
ಸರಳ ಸಜ್ಜನಿಕೆಯ ರಾಜಕಾರಣಿ, ಮಾಜಿ ಸಚಿವ ಹಾಗೂ ಕೆಎಲ್ಇ ಸಂಸ್ಥೆಯ ಮಾಜಿ ಅಧ್ಯಕ್ಷ ಶಿವಾನಂದ ಕೌಜಲಗಿ ಅವರ ನಿಧನಕ್ಕೆ ಬೆಳಗಾವಿ ಹುಕ್ಕೇರಿ ಹಿರೇಮಠ ಸಂಸ್ಥಾನದ ಅಧಿಪತಿಗಳು ಹಾಗೂ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ರಾಷ್ಟ್ರೀಯ ಉಪಾಧ್ಯಕ್ಷರಾದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಶಿವಾನಂದ ಕೌಜಲಗಿ ಅವರು ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದರೂ ಗುರುಗಳು ಹಾಗೂ ವಿರಕ್ತರೊಂದಿಗೆ ನಿಕಟ ಸಂಪರ್ಕ ಮತ್ತು ಆತ್ಮೀಯ ಬಾಂಧವ್ಯ ಹೊಂದಿದ್ದರು. ಅವರ ಸರಳತೆ, ಸಜ್ಜನಿಕೆ ಹಾಗೂ ಸಮಾಜದೊಂದಿಗಿನ ಒಡನಾಟ ಸ್ಮರಣೀಯವಾಗಿದೆ. ಅವರ ನಿಧನದಿಂದ ಸಮಾಜಕ್ಕೆ ತುಂಬಲಾರದ ನಷ್ಟ ಉಂಟಾಗಿದೆ.
ಅವರ ಅಗಲಿಕೆಯಿಂದ ದುಃಖಿತರಾಗಿರುವ ಕುಟುಂಬಸ್ಥರು, ಬಂಧುಗಳು ಹಾಗೂ ಅಪಾರ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

Total Views 38
RELATED ARTICLES

Most Popular

Recent Comments

KNN City News
Home
E-Paper