Thursday, November 19, 2026
HomeBelagaviಹಿರಿಯ ಸಾಹಿತಿ ಡಾ. ಜಿನದತ್ತ ದೇಸಾಯಿ ನಿಧನ

ಹಿರಿಯ ಸಾಹಿತಿ ಡಾ. ಜಿನದತ್ತ ದೇಸಾಯಿ ನಿಧನ

 

ಬೆಳಗಾವಿ
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ, ನಿವೃತ್ತ ಜಿಲ್ಲಾ ನ್ಯಾಯಾಧೀಶ ಹಾಗೂ ಭರತೇಶ ಎಜುಕೇಶನ್ ಟ್ರಸ್ಟ್‌ನ ಮಾಜಿ ಅಧ್ಯಕ್ಷ ಡಾ. ಜಿನದತ್ತ ದೇಸಾಯಿ (93) ಭಾನುವಾರ ನಿಧನರಾದರು.
1933ರ ಏಪ್ರಿಲ್ 3ರಂದು ಧಾರವಾಡ ಜಿಲ್ಲೆಯ ಅಮ್ಮಿನಭಾವಿಯಲ್ಲಿ ಜನಿಸಿದ ಅವರು, 1966ರಿಂದ 1991ರವರೆಗೆ ಬೆಳಗಾವಿಯಲ್ಲಿ ಜಿಲ್ಲಾ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದರು. ಕವಿ, ಲೇಖಕ ಹಾಗೂ ಲೋಕೋಪಕಾರಿಯಾಗಿ ಗುರುತಿಸಿಕೊಂಡಿದ್ದ ಅವರ 18 ಕವನ ಸಂಕಲನಗಳು ಪ್ರಕಟವಾಗಿವೆ.
2015ರಲ್ಲಿ ಗೌರವ ಡಾಕ್ಟರೇಟ್, 2017ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಹಾಗೂ 2021ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳು ಅವರಿಗೆ ಲಭಿಸಿದ್ದವು.
ಅವರು ಪುತ್ರ, ಪುತ್ರಿ ಹಾಗೂ ಕುಟುಂಬದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ನ.2ರಂದು ಬೆಳಿಗ್ಗೆ 11 ಗಂಟೆಗೆ ಬೆಳಗಾವಿಯ ಸದಾಶಿವನಗರ ಸ್ಮಶಾನದಲ್ಲಿ ನಡೆಯಲಿದೆ.

Total Views 24
RELATED ARTICLES

Most Popular

Recent Comments

KNN City News
Home
E-Paper