Sunday, November 22, 2026
HomeBelagaviಅರಣ್ಯದಲ್ಲಿ ಅಪರಿಚಿತ ವೃದ್ಧನ ಶವ ಪತ್ತೆ: ಅನುಮಾನದ ಹುತ್ತ

ಅರಣ್ಯದಲ್ಲಿ ಅಪರಿಚಿತ ವೃದ್ಧನ ಶವ ಪತ್ತೆ: ಅನುಮಾನದ ಹುತ್ತ

ಬೆಳಗಾವಿ
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ರಾಜವಾಡೆ ಅರಣ್ಯ ಪ್ರದೇಶದಲ್ಲಿ ಸುಮಾರು 60 ರಿಂದ 65 ವರ್ಷದ ಅಪರಿಚಿತ ವೃದ್ಧನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಅರಣ್ಯ ಪ್ರದೇಶದಲ್ಲಿ ಶವ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸಾವಿನ ಕುರಿತು ಅನುಮಾನ ವ್ಯಕ್ತವಾಗಿದೆ. ಮೃತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಅಥವಾ ಬೇರೆ ಯಾವುದಾದರೂ ಕಾರಣದಿಂದ ಮೃತಪಟ್ಟಿದ್ದಾನೆಯೇ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.
ಘಟನಾ ಸ್ಥಳಕ್ಕೆ ರಾಯಬಾಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Total Views 19
RELATED ARTICLES

Most Popular

Recent Comments

KNN City News
Home
E-Paper