
ಬೆಳಗಾವಿ
ಲೇಖಕ ರವಿ ಹಂಜ್ ವಿರುದ್ಧ ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ನ.26ರೊಳಗೆ ಖುದ್ದಾಗಿ ಮಾರ್ಕೆಟ್ ಪೊಲೀಸ್ ಠಾಣೆಗೆ ಹಾಜರಾಗಿ ವಿಚಾರಣೆ ಎದುರಿಸುವಂತೆ ನೋಟಿಸ್‌ನಲ್ಲಿ ಸೂಚಿಸಲಾಗಿದೆ.
ನಿನ್ನೆ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಬೆಳಗಾವಿ ಪೊಲೀಸರ ಲುಕ್‌ಔಟ್ ನೋಟಿಸ್ ಹಿನ್ನೆಲೆಯಲ್ಲಿ ರವಿ ಹಂಜ್ ಅವರನ್ನು ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ತಡೆದಿದ್ದರು. ಬಳಿಕ ಬೆಳಗಾವಿ ಪೊಲೀಸರ ಸೂಚನೆಯಂತೆ ವಿಮಾನ ನಿಲ್ದಾಣದ ಸೆಕ್ಯುರಿಟಿ ಮೂಲಕ ನೋಟಿಸ್ ನೀಡಲಾಗಿದ್ದು, ಇ-ಮೇಲ್ ಮೂಲಕವೂ ನೋಟಿಸ್ ಕಳುಹಿಸಿ ಸ್ವೀಕೃತಿ ಪಡೆಯಲಾಗಿದೆ. ಬಹುತೇಕ ರವಿ ಹಂಜ್ ಬೆಳಗಾವಿಯಲ್ಲಿಯೇ ಬಂಧನವಾಗುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
